ರಾಜ್ಯಗಳಿಗೆ ಲಸಿಕೆ: ಕೇಂದ್ರ ಸರ್ಕಾರ ಸ್ಪಷ್ಟನೆ!ಕೊರೋನಾ ಸೋಂಕಿತ ಆಸ್ಪತ್ರೆಯಲ್ಲೇ ಆತ್ಮಹತ್ಯೆ!

ರಾಜ್ಯಗಳಿಗೆ ಲಸಿಕೆ: ಕೇಂದ್ರ ಸರ್ಕಾರ ಸ್ಪಷ್ಟನೆ



ಕೊರೋನಾ ಲಸಿಕೆ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ

ಪ್ರಕಟಣೆ ನೀಡಿದ್ದು, ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು

ನೀಡುವುದನ್ನು ಮುಂದುವರಿಸುವುದಾಗಿ ಘೋಷಿಸಿದೆ.

ಕೋವಿಶೀಲ್, ಕೋವ್ಯಾಕ್ಸಿನ್ ಡೋಸ್ 150 ರೂ.ಗೆ

ಖರೀದಿಸಿ, ರಾಜ್ಯಗಳಿಗೆ ಉಚಿತವಾಗಿ ನೀಡುವುದಾಗಿ

ಹೇಳಿದೆ. ಉಳಿದ ಪ್ರಮಾಣದ ಡೋಸ್ ಗಳನ್ನು ರಾಜ್ಯ

ಸರ್ಕಾರ ಸಂಗ್ರಹಿಸಬೇಕು ಎಂದು ತಿಳಿಸಿದೆ. 

ಸೀರಮ್ಈಗಾಗಲೇ ಲಸಿಕೆಯನ್ನು ರಾಜ್ಯಗಳಿಗೆ 400 ರೂ. ಗಳಿಗೆ

ಮಾರಾಟ ಮಾಡುವುದಾಗಿ ಘೋಷಿಸಿದೆ.




ಕೊರೋನಾ ಸೋಂಕಿತ ಆಸ್ಪತ್ರೆಯಲ್ಲೇ ಆತ್ಮಹತ್ಯೆ!



ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ

ಚಿಕಿತ್ಸೆ ಪಡೆಯುತ್ತಿದ್ದ ರಾಮಣ್ಣ (61) ಎಂಬುವವರು

ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ

ಮಾಡಿಕೊಂಡಿರುವ ಘಟನೆ ನಡೆದಿದೆ.



 ವಿಜಯನಗರದ ಆಸ್ಪತ್ರೆಯೊಂದರಲ್ಲಿ ರಾಮಣ್ಣ ದಾಖಲಾಗಿದ್ದರು. 

ಆದರೆ ನಿನ್ನೆ ತಡರಾತ್ರಿ ಆಸ್ಪತ್ರೆಯ ಫ್ಯಾನ್‌ಗೆ ನೇಣು ಹಾಕಿಕೊಂಡು

ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪಶ್ಚಿಮ ವಿಭಾಗದ

ಡಿಸಿಪಿ ಸಂಜೀವ ಪಾಟೀಲ ತಿಳಿಸಿದ್ದಾರೆ. 

ಮಗನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Reactions

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು